Homeಕರ್ನಾಟಕಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ; ಭೀಕರ ಅಪಘಾತ, ಐದು ಸಾವು

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ; ಭೀಕರ ಅಪಘಾತ, ಐದು ಸಾವು

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಮಿಳುನಾಡು ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿ, ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ತಮಿಳುನಾಡು ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಮತ್ತು ಒಮ್ನಿ ನಡುವೆ ಶನಿವಾರ ನಸುಕಿನಲ್ಲಿ ಅಫಘಾತ ಸಂಭವಿಸಿದೆ. ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾವನ್ನಪ್ಪಿರುವವರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಹಾಗೂ ಓಮ್ನಿಬಸ್ ಚಾಲಕ ಎನ್ ಸೈಯದ್ ಎಂದು ಗುರುತಿಸಲಾಗಿದೆ.

“ಬೆಳಿಗ್ಗೆ ಮಾರು 4.00 ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments