Homeಕರ್ನಾಟಕರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಪ್ರದೋಷ್ ಸೇರಿ 17 ಜನರು ಆರೋಪಿಗಳಾಗಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.

ಈ ಹಿಂದೆ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. 64ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ನ್ಯಾ. ಐ ಪಿ ನಾಯ್ಕ್ ಅವರಿಂದ ಆದೇಶ ಪ್ರಕಟವಾಗಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments