ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಗೋಕಾಕದಿಂದ ಹೋಗಿದ್ದ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತೂಫಾನ್ ವಾಹನದಲ್ಲಿ ಇವರೆಲ್ಲರೂ ಪ್ರಯಾಗರಾಜ್ಗೆ ತೆರಳಿದ್ದರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಲಚಂದ್ರ ಗೌಡರ (50), ಸುನೀಲ ಶೇಡಶ್ಯಾಳೆ(45), ಬಸವರಾಜ ಕುರ್ತಿ(63), ಬಸವರಾಜ ದೊಡಮಾಳ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ(61) ಮೃತರು.
ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಬಲಪುರ್ ಜಿಲ್ಲಾಧಿಕಾರಿ ದೀಪಕ್ ಸಕ್ಷೇನಾ ಹೇಳಿದ್ದಾರೆ. ‘ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ’ ಎಂದು ಗೋಕಾಕ ಠಾಣೆ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿತ್ತು. ಲಾರಿ ಮತ್ತು ಕ್ರೂಸರ್ ನಡುವೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿತ್ತು. ಈ ಘಟನೆ ಬೆನ್ನಲ್ಲೇ ಈ ಅವಘಡ ಸಂಭವಿಸಿದೆ.