Homeಕರ್ನಾಟಕವಿದ್ಯುತ್ ಕಳ್ಳತನ ಆರೋಪ | ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ: ಕುಮಾರಸ್ವಾಮಿ

ವಿದ್ಯುತ್ ಕಳ್ಳತನ ಆರೋಪ | ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ: ಕುಮಾರಸ್ವಾಮಿ

ವಿದ್ಯುತ್ ದೀಪಗಳ ಅಲಂಕಾರದಲ್ಲಿ ಆದ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್​ ಸಂಪರ್ಕ ಪಡೆಯಲಾಗಿದೆ ಎಂಬ ಆರೋಪ ವಿಚಾರವಾಗಿ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿ, “ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ” ಎಂದಿದ್ದಾರೆ.

“ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ” ಎಂದು ಸ್ಷಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿ: ವಿದ್ಯುತ್‌ ಕಳ್ಳತನ ಮಾಡುವಷ್ಟು ದಾರಿದ್ರ್ಯ ಕುಮಾರಸ್ವಾಮಿಗೆ ಬಂತಾ?: ಕಾಂಗ್ರೆಸ್‌ ಕಿಡಿ

“ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments