Homeಕರ್ನಾಟಕಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶ್ರೀ ಮತ್ತೆ ಬಂಧನ

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶ್ರೀ ಮತ್ತೆ ಬಂಧನ

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಎರಡನೇ ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾಗಿದೆ.

ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಎರಡನೇ ಪೋಕ್ಸೆ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ನೀಡಿ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿತ್ತು.

ಶಿವಮೂರ್ತಿ ಶರಣರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಮಂಗಳವಾರದವರೆಗೆ ಕಾಲಾವಕಾಶ ನೀಡಿ ನ್ಯಾಯಾಧೀಶರಾದ ಬಿ ಕೆ ಕೋಮಲಾ ಅವರು ಆದೇಶ ಪ್ರಕಟಿಸಿದ್ದರು.

ಮೊದಲ ಪ್ರಕರಣವೊಂದಕ್ಕೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ, ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್‌ಗೆ ಮನವಿ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments