Homeಕರ್ನಾಟಕಆ್ಯಸಿಡ್ ನಿಷೇಧಕ್ಕೆ ಇನ್ನೆರಡು ದಿನದಲ್ಲಿ ಕ್ರಮ: ಸಚಿವ ಪರಮೇಶ್ವರ್

ಆ್ಯಸಿಡ್ ನಿಷೇಧಕ್ಕೆ ಇನ್ನೆರಡು ದಿನದಲ್ಲಿ ಕ್ರಮ: ಸಚಿವ ಪರಮೇಶ್ವರ್

ಆ್ಯಸಿಡ್ ನಿಷೇಧದ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆ್ಯಸಿಡ್ ದುರ್ಬಳಕೆಯಾಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಎಲ್ಲರ ಕೈಗೂ ಸುಲಭವಾಗಿ ಆ್ಯಸಿಡ್ ಸಿಗಬಾರದು. ಅಗತ್ಯತೆ ಇರುವರಿಗೆ ಮಾತ್ರ ಸಿಗಬೇಕು. ಈ ಕುರಿತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಇನ್ನೆರಡು ದಿನದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಇಂಡಸ್ಟ್ರಿಗಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಿದ್ದಾರೆ” ಎಂದು ತಿಳಿಸಿದರು.

“ರಾಮೇಶ್ವರ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಕುರಿತು ಕೆಲವು ಮಹತ್ವದ ಸುಳಿವು ಸಿಕ್ಕಿವೆ. ಘಟನೆಯ ನಂತರ ಬಟ್ಟೆ ಬದಲಾಯಿಸಿಕೊಂಡು, ಬಸ್ಸಿನಲ್ಲಿ ಹೋಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಎಲ್ಲ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದಷ್ಟು ಶೀಘ್ರ ಆರೋಪಿಯನ್ನು ಹಿಡಿಯಲಾಗುವುದು” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments