HomeUncategorizedನಟ ದರ್ಶನ್‌ಗೆ ಬೆನ್ನುಹುರಿ ಶಸ್ತ್ರ ಚಿಕಿತ್ಸೆ, ಆರು ವಾರಗಳ ಮಧ್ಯಂತರ ಜಾಮೀನು ಪ್ರಕಟ

ನಟ ದರ್ಶನ್‌ಗೆ ಬೆನ್ನುಹುರಿ ಶಸ್ತ್ರ ಚಿಕಿತ್ಸೆ, ಆರು ವಾರಗಳ ಮಧ್ಯಂತರ ಜಾಮೀನು ಪ್ರಕಟ

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದು, ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ದರ್ಶನ್‌ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿ, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಈ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರಸನ್ನ ಕುಮಾರ್ ತೀವ್ರ ಆಕ್ಷೇಪಿಸಿದರು.

ಎರಡೂ ಕಡೆಯ ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಆರು ವಾರಗಳ ಮಧ್ಯಂತರ ಜಾಮೀನು ಆದೇಶವನ್ನು ಬುಧವಾರ ಪ್ರಕಟಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯ ಪೈಕಿ ನಾಲ್ವರಿಗೆ ಜಾಮೀನು ದೊರೆತಿದೆ. ನಟಿ ಪವಿತ್ರ ಗೌಡ ಒಳಗೊಂಡು ಇನ್ನುಳಿದ 13 ಮಂದಿ ಕಳೆದ 140(ಜೂನ್‌.11) ದಿನಗಳಿಂದ ಬೆಂಗಳೂರು,ಮೈಸೂರು ಸೇರಿದಂತೆ ವಿವಿಧ ಜೈಲುಗಳಲ್ಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments