ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್ ಮಾಡಿಸಿದ್ದು, ಪಾಲಕರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಫೋಟೋ ಶೂಟ್ ಮಾಡಿಸಿದ ಪೋಷಕರಿಗೆ ಬಿಸಿ ಮುಟ್ಟಿಸಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾನೂನು ಕ್ರಮಕ್ಕೆ ಮುಂದಾಗಿದೆ.
ಖೈದಿ ಹೆಸರಿನಲ್ಲಿ ಫೋಟೋ ಶೂಟ್ ಪ್ರಕರಣವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಇದು ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಾನೂನಿನಡಿ ಯಾವೆಲ್ಲ ಕ್ರಮಗಳಿಗೆ ಸಾಧ್ಯತೆ ಇದೆಯೋ ಅದೆಲ್ಲವನ್ನೂ ಕೈಗೊಳ್ಳುವುದಾಗಿ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಸದ್ಯಕ್ಕೆ ಪೋಷಕರ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮಕ್ಕಳ ಹಕ್ಕುಗಳ ಆಯೋಗ ಮುಂದಾಗಿದೆ.