Homeಕರ್ನಾಟಕರಾಜ್ಯಕ್ಕೆ ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಶರಣಪ್ರಕಾಶ ಪಾಟೀಲ್‌

ರಾಜ್ಯಕ್ಕೆ ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಶರಣಪ್ರಕಾಶ ಪಾಟೀಲ್‌

ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು.

ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಕಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ. ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದು ವಿವರಿಸಿದರು.

ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ 15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1090 ಕೋಟಿ ರೂಪಾಯಿ ದೊರೆಯಲಿದೆ. ಒಂದು ಸಾವಿರ ಮೆಡಿಕಲ್‌ ಸೀಟ್‌ ಒಂದು ರಾಜ್ಯಕ್ಕೆ ಸಿಕ್ಕಿರುವುದು ದಾಖಲೆಯಾಗಿದೆ. ಕರ್ನಾಟಕದ ಸಾಧನೆಗೆ ಇದು ಪೂರಕವಾದ ಸಾಕ್ಷಿಯಾಗಿದೆ ಎಂದರು.

ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಅತಿ ಹೆಚ್ಚು ಸಾಧನೆ ಮಾಡಲು ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ದೊರೆತಂತಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ. ಶರಣಪ್ರಕಾಶ ಪಾಟೀಲ್ ಸಲಹೆ ನೀಡಿದರು.

ರಾಜ್ಯದಲ್ಲಿರುವ ವೈದ್ಯಕೀಯ ಕಾಲೇಜು (ಖಾಸಗಿ, ಡೀಮ್ಡ್‌ ಸೇರಿ) 72
ಲಭ್ಯವಿರುವ ಯುಜಿ ಸೀಟುಗಳು 13945
ಪಿಜಿ ಸೀಟುಗಳು 7727

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments