Homeಕರ್ನಾಟಕಐಶ್ವರ್ಯ ಗೌಡ ವಂಚನೆ ಪ್ರಕರಣ | ಇಬ್ಬರ ನಡುವೆ ಹಣಕಾಸಿನ ವಹಿವಾಟು ಇಲ್ಲ: ಡಿ ಕೆ...

ಐಶ್ವರ್ಯ ಗೌಡ ವಂಚನೆ ಪ್ರಕರಣ | ಇಬ್ಬರ ನಡುವೆ ಹಣಕಾಸಿನ ವಹಿವಾಟು ಇಲ್ಲ: ಡಿ ಕೆ ಸುರೇಶ್

ಇ.ಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವೆ ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಗಳು ಇ.ಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ. ಏನು ಮಾಡುತ್ತಾರೆ ಎಂದು ನೋಡೋಣ” ಎಂದು ಮಾರ್ಮಿಕವಾಗಿ ನುಡಿದರು.

ಐಶ್ವರ್ಯ ಗೌಡ ನಿಮ್ಮ ಹೆಸರು ಹೇಳಿಕೊಂಡು ವಂಚನೆ ಮಾಡಿದ್ದಾರೆ. ನಿಮ್ಮ ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯೇ ಎಂದಾಗ, “ಆ ಮಹಿಳೆ ಹಾಗೂ ನಮ್ಮ ನಡುವೆ ಯಾವುದೇ ಹಣಕಾಸು ಹಾಗೂ ಇತರೇ ವಹಿವಾಟು ನಡೆದಿಲ್ಲ. ಅವರು ಮೂರ್ನಾಲ್ಕು ಬಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕೆಲವೊಂದು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ವಾಸ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಅವರ ಆಯೋಜನೆಯ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ನಟರೊಬ್ಬರು ನಿಮ್ಮ ದನಿ ಅನುಕರಣೆ ಮಾಡಿ ವಂಚನೆ ಎಸಗಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆಯ ಬೆಳವಣಿಗೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments