Homeದೇಶಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಸಂಜೆ ಡಿಸಿಎಂ ಆಗಿ ಪ್ರಮಾಣ

ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಸಂಜೆ ಡಿಸಿಎಂ ಆಗಿ ಪ್ರಮಾಣ

ಇತ್ತೀಚಿಗೆ ವಿಮಾನ ಪತನದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಶನಿವಾರ ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಇಂದು (ಜ.31) ಮುಂಬೈನಲ್ಲಿ ನಡೆದ ಎನ್ ಸಿಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ಎನ್‌ಸಿಪಿ ನಾಯಕ ಛಗನ್ ಭುಜಬಲ್ ಅವರು ರಾಜ್ಯಸಭಾ ಸದಸ್ಯೆಯಾಗಿರುವ ಸುನೇತ್ರಾ ಪವಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕಿ ಸ್ಥಾನಕ್ಕೆ ಪ್ರಸ್ತಾಪಿಸಿದರು ಮತ್ತು ಇತರ ಹಿರಿಯ ನಾಯಕರು ಅದನ್ನು ಅನುಮೋದಿಸಿದರು.

ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವ ಸುನೇತ್ರಾ ಪವಾರ್ ಅವರು ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2024ರಲ್ಲಿ ಎನ್ ಸಿಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಸುನೇತ್ರಾ ಪವಾರ್ ಅವರನ್ನು ಜೂನ್ 18, 2024 ರಂದು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.

ಇದೀಗ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಸುನೇತ್ರಾ ಅವರು, ಪತಿ ಅಜಿತ್ ಪವಾರ್ ಅವರು ವಹಿಸಿಕೊಂಡಿದ್ದ ಹಣಕಾಸು, ಅಬಕಾರಿ ಹಾಗೂ ಕ್ರೀಡಾ ಸೇರಿದಂತೆ ಪ್ರಮುಖ ಖಾತೆಗಳನ್ನು ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments