Homeಕರ್ನಾಟಕಆಳಂದ ಗಲಭೆ ಪ್ರಕರಣ | ಓಟ್‍ಬ್ಯಾಂಕ್‍ಗಾಗಿ ರಾಜ್ಯ ಸರ್ಕಾರದ ನೀಚ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

ಆಳಂದ ಗಲಭೆ ಪ್ರಕರಣ | ಓಟ್‍ಬ್ಯಾಂಕ್‍ಗಾಗಿ ರಾಜ್ಯ ಸರ್ಕಾರದ ನೀಚ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತ್ತು ಅಲ್ಪಸಂಖ್ಯಾತರನ್ನು ಓಲೈಸಲು ಆಳಂದದ ಶ್ರೀ ರಾಘವ ಚೈತನ್ಯ ಮಂದಿರದ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ ಎಂದು ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.

ಕಲಬುರ್ಗಿಯ ಆಳಂದದಲ್ಲಿ ಪವಿತ್ರ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್‍ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ ಎಂದರು.

ಇಂತಹ ಸಮಾಜವಿರೋಧಿ ಹಾಗೂ ಕ್ರಿಮಿನಲ್ ತತ್ವಗಳ ಬೆನ್ನಿಗೆ ನಿಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ತಾನು ಜನವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಹಿನ್ನೆಲೆಯಲ್ಲಿ, ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ಗೌರವಾನ್ವಿತ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಯಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಘಟನೆಯ ವಿಚಾರಣೆ ಕೋರ್ಟ್‍ನಲ್ಲಿ ಬಾಕಿ ಇರುವಾಗಲೇ ಸರ್ಕಾರ ದಾಳಿಕೋರರ ಮೇಲಿನ ಪ್ರಕರಣವನ್ನು ವಾಪಸ್ ಪಡೆದಿದೆ. ಇದನ್ನು ವಾಪಸ್ ಪಡೆಯಬಾರದು ಎಂದು ಆಗ್ರಹಿಸಿ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು. ರಾಘವ ಚೈತನ್ಯ ಮಂದಿರದಲ್ಲಿನ ಶಿವಲಿಂಗಕ್ಕೆ ಆರು ನೂರು ವರ್ಷಗಳ ಇತಿಹಾಸವಿದೆ. ಇಲ್ಲಿ ಪದೇ ಪದೇ ಗಲಭೆಗಳು ಆಗಿವೆ. ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು.

ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕುತ್ತಾರೆ. ಕನ್ನಡ ಪರ ಸಂಘಟನೆಗಳ ಮುಖಂಡರು ಕನ್ನಡದ ಪರ ಹೋರಾಟ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತಾರೆ. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರನ್ನು ಜೈಲಿಗೆ ಕಳಿಸಿದ್ದರು. ಆದರೆ ಬಾಂಬ್ ಹಾಕಿದವರ ಮೇಲೆ, ತಲವಾರುಗಳಿಂದ ಹಲ್ಲೆ ಮಾಡಿದವರ ಮೇಲೆ ದೂರು ದಾಖಲಿಸಿ ಶಿಕ್ಷೆ ಕೊಡಿಸುವುದು ಬಿಟ್ಟು ಪ್ರಕರಣ ವಾಪಸ್ ಪಡೆಯುತ್ತಾರೆ. ರಾಜ್ಯ ಸರ್ಕಾರದ ಇಂತಹ ನೀಚ ಓಲೈಕೆ ರಾಜಕಾರಣವನ್ನು ಖಂಡಿಸಲಾಗುವುದು. ರಾಜ್ಯ ಸಚಿವ ಸಂಪುಟ ಕೈಗೊಂಡ ತೀರ್ಮಾನವನ್ನು ಪಾಪಸ್ ಪಡೆಯಬೇಕು ಎಂದು ಮಾನ್ಯ ರಾಜ್ಯಪಾಲರಲ್ಲಿ ಮನವಿ ಮಾಡಿದ್ದೇವೆ ಎಂದು ವಿವರಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಸುನಿಲ್ ವಲ್ಯಾಪುರೆ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ಜಿ. ನಮೋಶಿ ಮತ್ತು ಬಿ.ಜಿ. ಪಾಟೀಲ್, ಶಾಸಕ ಅವಿನಾಶ್ ಜಾಧವ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್, ಕಲ್ಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮುಖಂಡರಾದ ಶರಣಪ್ಪ ತಳವಾರ, ಶಿವರಾಜ ಪಾಟೀಲ್ ರದ್ದೇವಾಡಗಿ, ಸಂಜಯ್ ಮಿಸ್ಕಿನ್, ನಿತಿನ್ ಗುತ್ತೇದಾರ್, ಹμರ್Áನಂದ ಗುತ್ತೇದಾರ್, ಲಿಂಗರಾಜ ಬಿರಾದಾರ, ಆನಂದ ಪಾಟೀಲ್, ಬಸವರಾಜ ಬೆಣ್ಣೂರ ಸೇರಿದಂತೆ ಪಕ್ಷದ ಮುಖಂಡರು, ಪ್ರಮುಖರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments