Homeಕರ್ನಾಟಕಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ, ಜಮೀನು ಸರ್ವೆ ಕಾರ್ಯ ಆರಂಭ

ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ, ಜಮೀನು ಸರ್ವೆ ಕಾರ್ಯ ಆರಂಭ

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿನ ಜಮೀನು ಸರ್ವೆ ಕಾರ್ಯ ಆರಂಭವಾಗಿದೆ.

ಈ ಪ್ರಕರಣದಲ್ಲಿ ರಾಜ್ಯ ಕಂದಾಯ ಇಲಾಖೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಮಾಡಲಾಗಿದೆ. ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್ಗಳ ಜಮೀನು ಪರಿಶೀಲನೆ ಮಾಡಲಾಗಿದೆ.

ಹೆಚ್‌ ಡಿ ಕುಮಾರಸ್ವಾಮಿ, ಸಹೋದರಿ ಅನುಸೂಯ ಮಂಜುನಾಥ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಕಂದಾಯ ಅಧಿಕಾರಿಗಳು ಸರ್ವೆ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕೇಂದ್ರ ಮಂತ್ರಿ ಕುಮಾರಸ್ವಾಮಿ 14 ಎಕರೆ ಭೂಮಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಆರೋಪ ಕುರಿತಂತೆ ವರದಿ ನೀಡಲು ವಿಳಂಬ ಮಾಡಿದ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತರನ್ನು ಕೋರ್ಟ್‌ಗೆ ಕರೆಯಿಸಿಕೊಂಡು ಖಡಕ್‌ ಸೂಚನೆ ನೀಡಿತ್ತು.

ಇದರ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ಮಾಡಲಾಗಿದೆ. ಇನ್ನು ಹೆಚ್‌ ಡಿ ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಡಿಸಿ ತಮ್ಮಣ್ಣ  ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇದರ ಸಮಗ್ರ ತನಿಖೆ ನಡೆಸಬೇಕು ಎಂದು ಕಂದಾಯ ಇಲಾಖೆಗೆ ಲೋಕಾಯುಕ್ತರು 2014ರಲ್ಲಿ ಆದೇಶಿಸಲಾಗಿತ್ತು. ಲೋಕಾಯುಕ್ತರ ಆದೇಶವನ್ನು ಇತ್ತೀಚೆಗೆ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಆದರೆ, ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಬಳಿಕ ಕ್ರಮ ಕೈಗೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments