Homeಕರ್ನಾಟಕಬಿಎಸ್‌ವೈ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ರಾಜಕೀಯ ದುರುದ್ದೇಶವಿಲ್ಲ: ಸಚಿವ ಪರಮೇಶ್ವರ್‌

ಬಿಎಸ್‌ವೈ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ರಾಜಕೀಯ ದುರುದ್ದೇಶವಿಲ್ಲ: ಸಚಿವ ಪರಮೇಶ್ವರ್‌

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ರಾಜಕೀಯ ದುರುದ್ದೇಶವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, “ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂಬುದು ತಿಳಿದುಬಂದಿದೆ. ಮಹಿಳೆಯೊಬ್ಬರು ನೀಡಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದರು.

“ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಅವರ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದರು. ಅದನ್ನು ಪೊಲೀಸರು ಪರಿಶೀಲಿಸಿ ಎಫ್ಐಆರ್ ದಾಖಲಿಸಿದ್ದಾರೆ‌. ತನಿಖೆ ನಡೆಯುತ್ತಿದೆ. ಈಗಲೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಆಗುವುದಿಲ್ಲ” ಎಂದು ಹೇಳಿದರು.

ದೂರುದಾರ ಮಹಿಳೆಗೆ ರಕ್ಷಣೆ

“ಅಗತ್ಯ ಕಂಡುಬಂದರೆ ದೂರುದಾರ ಮಹಿಳೆಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತದೆ. ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಬೇಕೆ? ಬೇಡವೆ? ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೊಲೀಸರು ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ ಜರುಗಿಸುತ್ತಾರೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯವರಿಗಾಗಲಿ, ಉಪ ಮುಖ್ಯಮಂತ್ರಿಯವರಿಗಾಗಲಿ, ನನಗಾಗಲೀ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ದೂರು ಕೊಟ್ಟ ಮಹಿಳೆ ಮಾನಸಿಕ‌ ಅಸ್ವಸ್ಥೆ ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಕೈಬರಹದ ದೂರು ಕೊಟ್ಟಿಲ್ಲ, ಟೈಪ್ ಮಾಡಿದ ದೂರಿನ ಪ್ರತಿಯನ್ನು ಸಲ್ಲಿಸಿದ್ದರು” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments