Homeಕರ್ನಾಟಕಮತಗಳ್ಳತನ ಆರೋಪ, ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿದ್ದರಾಮಯ್ಯ

ಮತಗಳ್ಳತನ ಆರೋಪ, ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.

“ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ” ಎಂದು ವಿವರಿಸಿದರು.

“ಚುನಾವಣಾ ಆಯೋಗ ಸಂವಿಧನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ. ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ” ಎಂದರು.

“ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಕಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. EVM ಬಂದ ಮೇಲೆ ಇವನ್ನು ದುರುಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ” ಎಂದು ಘೋಷಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments