ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಮೂಡಿಸಿದೆ.
ಭೇಟಿಯ ವಿಚಾರವನ್ನು ಜನಾರ್ಧನ ರೆಡ್ಡಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಅಮಿತ್ ಶಾ ಅವರ ಆಹ್ವಾನ ಮೇರೆಗೆ ದೆಹಲಿಗೆ ಆಗಮಿಸಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.
ಮುಂದುವರಿದು, “ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಬಹಳ ಸಂತೋಷ ತಂದಿದೆ” ಎಂದು ಹೇಳಿಕೊಂಡಿದ್ದಾರೆ.
ಬಳ್ಳಾರಿ ಕ್ಷೇತ್ರಕ್ಕ ಸ್ವಂತ ಅಭ್ಯರ್ಥಿ ಹಾಕುತ್ತೇವೆ ಎಂದು ಇತ್ತೀಚೆಗೆ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದ್ದರು. ರೆಡ್ಡಿ ಆಪ್ತ ಗೆಳೆಯ ಶ್ರೀರಾಮುಲು ಅವರನ್ನು ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈಗ ದಿಢೀರಾಗಿ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಕೂತೂಹಕ್ಕೆ ಕಾರಣವಾಗಿದೆ.
ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತವನ್ನು ಚಲಾಯಿಸಿದ್ದರು. ಅದಕ್ಕೂ ಮುನ್ನ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.