ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
155ನೇ ಜನ್ಮದಿನದ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಲವರು ಈ ಬಗ್ಗೆ ಆಕ್ಷೇಪ ಹೊರಹಾಕಿದ್ದಾರೆ.
“ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಎಕ್ಸ್ ತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಅನ್ನು ಹಂಚಿಕೊಂಡಿರುವ ಅವರು, “
ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಾಗೂ ಕಾಂಗ್ರೆಸ್ ಭಾರತೀಯರ ಕ್ಷಮೆ ಕೇಳಲಿ” ಎಂದು ಆಗ್ರಹಿಸಿದ್ದಾರೆ.