ಹುಲಿ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಕಳೆದ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಿ ಪ್ರಮಾಣ ಪತ್ರ ಪಡೆಯಲು ಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು.
ಅಧಿಸೂಚನೆಯ ಅಧಿನಿಯಮಗಳ ವಿರುದ್ಧ ರಂಜಿ ಪೂನಚ್ಚ ಮತ್ತು ಕುಟ್ಟಪ್ಪ ರವರು ಹೈಕೋರ್ಟ್‌ನಲ್ಲಿ ದಾವೆಯನ್ನು ಹೂಡಿದ್ದರು. ವಿಚಾರಣೆ ನಡೆಸಿದ ಮಾನ್ಯ ಉಚ್ಚನ್ಯಾಯಾಲಯವು ಅಧಿಸೂಚನೆಯ ಅಧಿನಿಯಮಗಳಿಗೆ ಮಧ್ಯಾಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಲಾಗಿದೆ.
ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ ಎಸ್ ಪೊನ್ನಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.