ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದ ಬಳಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಕೃಷಿ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವ ಮತ್ತು ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಬಂಧುಗಳು ನಡೆಸುತ್ತಿದ್ದ ಪ್ರತಿಭಟನೆಯ ಸ್ಥಳಕ್ಕೆ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪನವರು ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಇದೇ ವೇಳೆ ಈ ಹಿಂದಿನ ಸರ್ಕಾರದ ವೇಳೆ ಜಾರಿಗೊಳಿಸಲಾಗಿದ್ದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ಮಾನ್ಯ ಸಚಿವರು ರೈತರಿಗೆ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ, ಹಾಲಿನ ದರದ ಹೆಚ್ಚಳ, ಕಬ್ಬಿಗೆ ಬೆಂಬಲ ಬೆಲೆ ನೀಡುವುದರ ಜೊತೆಗೆ ರೈತರ ಹಲವು ಬೇಡಿಕೆಗಳ ಕುರಿತು ಸದನದಲ್ಲಿ ಚರ್ಚಿಸಲಾಗುವುದು ಎಂದು ಮಾನ್ಯ ಸಚಿವರು ತಿಳಿಸಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಲಾದ ಎಲ್ಲಾ ರೈತಪರವಾದ ಸಂಗತಿಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ವಹಿಸಲಿದೆ ಎಂದು ಹೇಳಿದ ಮಾನ್ಯ ಸಚಿವರು ರೈತರ ಮನವಿಗಳನ್ನು ಸ್ವೀಕರಿಸಿದರು.