Homeಕರ್ನಾಟಕಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್‌ ಆಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್‌ ಆಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

ಪ್ರಾದೇಶಿಕ ಸೇನೆಯಲ್ಲಿ (Territorial army)ಕಮಿಷನರ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ಕರ್ನಾಟಕದ ಕಾಂಗ್ರೆಸ್‌ ವಕ್ತಾರೆ ಭವ್ಯ ನರಸಿಂಹಮೂರ್ತಿ ನಿಯೋಜನೆಗೊಂಡಿದ್ದಾರೆ.

ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿರುವ ಭವ್ಯ ನರಸಿಂಹಮೂರ್ತಿ ಅವರು 2022ನೇ ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ.

ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟನಂಟ್ (Lieutenant) ಆಗಿ ನಿಯೋಜನೆಗೊಂಡಿದ್ದಾರೆ.

ಪ್ರಾದೇಶಿಕ ಸೇನೆಯು ಭಾರತೀಯ ನಾಗರಕರಿಗೆ ತಮ್ಮ ನಾಗರಿಕ ವೃತ್ತಿಯ ಜೊತೆಗೆ ಭಾರತೀಯ ಸೇನೆಯ ಭಾಗವಾಗಿ ದೇಶಸೇವೆ ಮಾಡುವ ಅವಕಾಶ ಒದಗಿಸಿಕೊಡುತ್ತದೆ. ಪ್ರಸ್ತುತ ಪ್ರಾದೇಶಿಕ ಸೇನೆಯಲ್ಲಿ ಕ್ರಿಕೆಟ್ ಆಟಗಾರ ಎಂ ಎಸ್ ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದ್ದಾರೆ.

“ನನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ ಇದಾಗಿದೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಸಲ್ಲಿಸುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲು ಸಿದ್ದಳಿದ್ದೇನೆ. ವರ್ಷದಲ್ಲಿ ಎರಡು ತಿಂಗಳು ನಾನು ದೇಶ ಸೇವೆ ಮಾಡಬೇಕು. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಸದಾ ಹೀಗೆ ಇರಲಿ” ಎಂದು ಭವ್ಯ ನರಸಿಂಹಮೂರ್ತಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments