ಸರ್ಕಾರದಿಂದ ರಚನೆಯಾದ ವಿವಿಧ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳ ಅಧ್ಯಕ್ಷರ ಹಾಗೂ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಸರ್ಕಾರ ಆದೇಶಿಸಿದೆ.
ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ. ಬಿ ಎಲ್ ಶಂಕರ್, ಸೂಳೇಭಾವಿಯ ಪಿ ಬಿ ಧುತ್ತರಗಿ ಟ್ರಸ್ಟ್‌ಗೆ ಸಂಗಪ್ಪ ಕೊನೆಸಾಗರ, ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್‌ಗೆ ಗಣನಾಥ ಎಕ್ಕಾರು, ಬಾಗಲಕೋಟೆಯ ಕವಿ ಚಕ್ರವರ್ತಿ ರನ್ನ ಪ್ರತಿಷ್ಠಾನಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ, ಮಂಡ್ಯದ ಪು.ತಿ.ನ ಟ್ರಸ್ಟ್‌ಗೆ ಪ್ರೊ.ಎಂ ಕೃಷ್ಣಗೌಡ, ವಿಜಯಪುರದ ಹಲಸಂಗಿ ಗೆಳೆಯ ಟ್ರಸ್ಟ್‌ಗೆ ವಿಜಯಪುರ ಜಿಲ್ಲಾಧಿಕಾರಿ, ಬೆಳಗಾವಿಯ ಡಾ.ಬಸವರಾಜ ಕಟ್ಟೀಮನಿ ಪ್ರತಿಷ್ಠಾನಕ್ಕೆ ಡಾ. ಯಲ್ಲಪ್ಪ ರಾಯಭಾಗ ಹಾಗೂ ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ಗೆ ವಿನಯ ನಾಯಕ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸದಸ್ಯರ ಪೂರ್ಣ ಪಟ್ಟಿ ಇಲ್ಲಿದೆ..