ಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಿದ್ದಾರೆ.
ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಅವರನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ಮತ್ತು ಉಳಿದ ಏಳು ರಾಜ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ವಿವಿಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ರಾಜ್ಯ ಮಾಹಿತಿ ಆಯುಕ್ತರು
ರಾಮನ್. ಕೆ., ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ. ಚನ್ನಲ್, ರಾಜಶೇಖರ ಎಸ್, ಬದ್ರುದ್ದೀನ್ ಕೆ, ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಬಿ.ಆರ್. ಇವರು ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿದ್ದಾರೆ.


