Homeಕರ್ನಾಟಕಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ | ಸಿಐಡಿ ತನಿಖೆಗೆ ಹಸ್ತಾಂತರ: ಪ್ರಿಯಾಂಕ್ ಖರ್ಗೆ

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ | ಸಿಐಡಿ ತನಿಖೆಗೆ ಹಸ್ತಾಂತರ: ಪ್ರಿಯಾಂಕ್ ಖರ್ಗೆ

ಕರ್ನಾಟಕ ಲೋಕಸೇವಾ ಆಯೋಗದ (KPSC) 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳನ್ನು ಸಿಐಡಿ (ಅಪರಾಧ ತನಿಖಾ ದಳ) ತನಿಖೆಗೆ ಹಸ್ತಾಂತರಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ತಿಳಿಸಿದ್ದಾರೆ.

ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಹಾಗೂ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, “ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆಯನ್ನು ಖಚಿತಪಡಿಸುವ ದೃಷ್ಟಿಯಿಂದ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಮಾರ್ಗಗಳ ತಡೆಗಟ್ಟುವಿಕೆ ಕ್ರಮಗಳು) ಕಾಯ್ದೆ-2023’ರ ಸೆಕ್ಷನ್ 10ರ ಅಡಿಯಲ್ಲಿ ಬೆಂಗಳೂರು ನಗರದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೆಪಿಎಸ್‌ಸಿ ವಿರುದ್ಧ ದಾಖಲಿಸಲಾದ ಎರಡು ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments