ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್ಗೆ ಆದ್ಯತೆ ನೀಡುವ ಸಲುವಾಗಿ ಚುಟುಕು ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿರುವುದಾಗಿ ಸ್ಟಾರ್ಕ್ ತಿಳಿಸಿದ್ದಾರೆ.
13 ವರ್ಷಗಳ ವರ್ಷಗಳ ಸುದೀರ್ಘ ಚುಟುಕು ಕ್ರಿಕೆಟ್ ಆಟದಲ್ಲಿ ಇದ್ದರು. ಆಸ್ಟ್ರೇಲಿಯಾ ಕ್ರಿಕೆಟ್ ಸರ್ವ ಶ್ರೇಷ್ಠ ವೇಗಿಗಳಲ್ಲಿ ಒಬ್ಬರಾಗಿದ್ದರು. ಮಿಚೆಲ್ ಸ್ಟಾರ್ಕ್ ದಿಢೀರ್ ನಿವೃತ್ತಿ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಆಗಿಸಿದೆ.
“ಸದ್ಯ ನಾನು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯುವೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ-20 ಕ್ರಿಕೆಟ್ಗೆ ವಿದಾಯ ಹೇಳಿದ್ದೇನೆ” ಎಂದು ಮಿಚೆಲ್ ಸ್ಟಾರ್ ತಿಳಿಸಿದ್ದಾರೆ.
ಸ್ಟಾರ್ಕ್ ಆಸೀಸ್ ಪರ ಒಟ್ಟು 65 ಟಿ-20 ಪಂದ್ಯಗಳನ್ನು ಆಡಿದ್ದಾರೆ. 2021ರ ಟಿ20 ವಿಶ್ವಕಪ್ ಗೆಲುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರವಹಿಸಿದ್ದರು. 2024 ರಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆದ ಟಿ-20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ಪರ ಸ್ಟಾರ್ಕ್ ಕೊನೆಯ ಬಾರಿ ಟಿ-20 ಪಂದ್ಯ ಆಡಿದ್ದರು.
ಆಸ್ಟ್ರೇಲಿಯಾ ಪರ ಆಡಮ್ ಜಂಪಾ ನಂತರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಸ್ಟಾರ್ಕ್ ಪಾತ್ರರಾಗಿದ್ದಾರೆ. 2012 ರಲ್ಲಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ಟಿ-20 ತಂಡದಲ್ಲಿ ಸ್ಥಾನ ಪಡೆದಿದ್ದರು.
ಆಸ್ಟ್ರೇಲಿಯಾ ಪರ 65 ಟಿ20 ಪಂದ್ಯಗಳನ್ನಾಡಿರುವ ಮಿಚೆಲ್ ಸ್ಟಾರ್ಕ್ 1458 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 1881 ರನ್ಗಳನ್ನು ನೀಡಿರುವ ಅವರು ಒಟ್ಟು 79 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.