Homeಕರ್ನಾಟಕಯಡಿಯೂರಪ್ಪ ಪುತ್ರ ವಿಜಯೇಂದ್ರನ ಹೆಗಲಿಗೆ ರಾಜ್ಯ ಬಿಜೆಪಿ ಘಟಕ

ಯಡಿಯೂರಪ್ಪ ಪುತ್ರ ವಿಜಯೇಂದ್ರನ ಹೆಗಲಿಗೆ ರಾಜ್ಯ ಬಿಜೆಪಿ ಘಟಕ

ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದ್ದು, ಬಿ ಎಸ್‌ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಜ್ಯ ಘಟಕದ ಹುದ್ದೆಗೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅದೇಶಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅದೇಶದಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ವಿಜಯೇಂದ್ರ ಅವರನ್ನು ನೇಮಿಸಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿತ್ತು. ನಂತರ ಪಕ್ಷದ ವರಿಷ್ಠರ ಸೂಚನೆಯಂತೆ ಅವರು ಹುದ್ದೆಯಲ್ಲಿ ಕಟೀಲ್ ಮುಂದುವರಿದಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಭಾವವನ್ನು ರಾಜ್ಯದಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥ ನಾಯಕರ ಹುಡುಕಾಟವನ್ನು ಪಕ್ಷ ನಡೆಸಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಅಂತಿಮವಾಗಿ ಬಿ ವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಮಣೆ ಹಾಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments