Homeಕರ್ನಾಟಕಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ ವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ ವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.

ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಬಿ ಎಲ್ ಸಂತೋಷ್ ಬಣ ಗೈರು

ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದ್ದು ಕಂಡುಬಂತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ.

ಸಿ ಟಿ ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ ಸುಧಾಕರ್​, ಅರವಿಂದ ಬೆಲ್ಲದ, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕರು ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮದಿಂದ ದೂರು ಉಳಿದರು.

ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್​ ಯಡಿಯೂರಪ್ಪ, ಡಿ ವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು. ನಿನ್ನೆ ರಾತ್ರಿಯಿಂದ ಪುರೋಹಿತರಾದ ನಾಗೇಂದ್ರ ಭಾರದ್ವಾಜ್ ತಂಡದಿಂದ ಬಿಜೆಪಿ ಕಚೇರಿಯಲ್ಲಿ ನಡೆದ ವಾಸ್ತು ಪೂಜೆ, ಗಣ ಹೋಮ, ದುರ್ಗಾ ಹೋಮ, ಸುದರ್ಶನ ಹೋಮ ಮತ್ತು ತ್ರೈಲೋಕ್ಯ ಸುಂದರಿ ಹೋಮ ಮತ್ತು ಪೂಜಾ ಕಾರ್ಯಗಳು ನಡೆದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments