Homeಕರ್ನಾಟಕರಮೇಶ್ ಜಾರಕಿಹೊಳಿಗೆ ಮೊದಲ ಸಲ ಎಚ್ಚರಿಕೆ ಕೊಟ್ಟ ಬಿ ವೈ ವಿಜಯೇಂದ್ರ

ರಮೇಶ್ ಜಾರಕಿಹೊಳಿಗೆ ಮೊದಲ ಸಲ ಎಚ್ಚರಿಕೆ ಕೊಟ್ಟ ಬಿ ವೈ ವಿಜಯೇಂದ್ರ

ತಮ್ಮ ನಾಯಕತ್ವದ ಬಗ್ಗೆ ತಕರಾರು ತೆಗೆದು ಪದೇ ಪದೇ ಹೇಳಿಕೆ ನೀಡುತ್ತಿರುವ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನೇರ ಎಚ್ಚರಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿರಿಯರಾದ ರಮೇಶ ಜಾರಕಿಹೊಳಿ ಅವರಿಗೆ ತಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಬಗ್ಗೆ ಯಾವುದಾದರೂ ತಕರಾರು ಇದ್ದರೆ ಅದನ್ನು ಹೈಕಮಾಂಡ್ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವುದು ಬೇಡ” ಎಂದು ಹೇಳಿದರು.

“ರಮೇಶ್ ಜಾರಕಿಹೊಳಿ ಅವರು ಇತ್ತೀಚೆಗೆ ತಾನೇ ಪಕ್ಷಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಹಳ್ಳಿಹಳ್ಳಿ ಸುತ್ತಿ ಪಕ್ಷವನ್ನು ಸಂಘಟಿಸಿದ್ದಾರೆ. ಇವರ ಬಗ್ಗೆ ಅತ್ಯಂತ ಜಾಗರೂಕತೆಯಿಂದ ಮಾತನಾಡಬೇಕು. ತಾವು ಪಕ್ಷದ ಅಧ್ಯಕ್ಷರಾದ ನಂತರ ಯಾವುದೇ ರೀತಿಯ ಸಮಸ್ಯೆ ಉಂಟಾಗಿಲ್ಲ ನಿಜವಾದ ಸಮಸ್ಯೆ ಉಂಟಾಗಿರುವುದು ಜಾರಕಿಹೊಳಿ ಅವರ ಕ್ಷೇತ್ರದಲ್ಲಿ ಯಾರ ವೈಫಲ್ಯ ಎಂಬುದನ್ನು ಅವರ ಕ್ಷೇತ್ರದ ಜನತೆಗೆ ಹೇಳುತ್ತಿದ್ದಾರೆ. ಹೀಗಾಗಿ ಅವರು ಆ ಬಗ್ಗೆ ಗಮನಹರಿಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಜಾರಕಿಹೊಳಿ ಅವರು ಬಾಯಿಗೆ ಬಂದಂತೆ ಮಾತನಾಡುವುದನ್ನು ಮೊದಲು ಬಿಡಬೇಕು. ಇದರಿಂದ ಅನಗತ್ಯವಾಗಿ ಕಾರ್ಯಕರ್ತರು ಗೊಂದಲಕ್ಕೆ ಬೀಳುತ್ತಿದ್ದಾರೆ. ತಾವು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಇಂತಹ ಮಾತುಗಳಿಗೆ ಬೆಲೆ ಕೊಡಬೇಡಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು ಸದ್ಯದಲ್ಲಿಯೇ ಎಲ್ಲವೂ ಬಗೆಹರಿಯಲಿದೆ” ಎಂದು ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments