ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾದರು.
ಗುತ್ತೇದಾರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಬಳಿಕ ಜಿಲ್ಲೆಯಲ್ಲಿ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಂ ವೈ ಪಾಟೀಲ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.
ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಾಗಲು ಕಾರಣ ಅವರ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದು. ಈ ನಡೆಯಿಂದ ವಿಜಯೇಂದ್ರ, ಸಿ ಟಿ ರವಿ ಹಾಗೂ ಪಿ ರಾಜೀವ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.