Homeಕರ್ನಾಟಕಬೆಂಗಳೂರು ಏರ್ ಶೋ-2025 | ಜ.23 ರಿಂದ ಫೆ.17ರವರೆಗೆ ಮಾಂಸ ಮಾರಾಟ ನಿಷೇಧಿಸಿ ಆದೇಶ

ಬೆಂಗಳೂರು ಏರ್ ಶೋ-2025 | ಜ.23 ರಿಂದ ಫೆ.17ರವರೆಗೆ ಮಾಂಸ ಮಾರಾಟ ನಿಷೇಧಿಸಿ ಆದೇಶ

ಯಲಹಂಕ ವಾಯುನೆಲೆಯಲ್ಲಿ “ಏರ್ ಶೋ-2025” ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರವರಿ 2025ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ ತಿಳಿಸಿದ್ದಾರೆ.

ಯಲಹಂಕ ಏರ್ ಪೋರ್ಸ್ ಸ್ಟೇಷನಲ್ಲಿ ದಿನಾಂಕ 10.02.2025 ರಿಂದ 14.02.2025 ರವರೆಗೆ ಅಂತಾರಾಷ್ಟ್ರೀಯ ಏರ್‌ ಶೋ ನಡೆಯಲಿದೆ. ಈ ಸಂಬಂಧ ಯಲಹಂಕ ವಲಯದ ಏರ್‌ಪೋರ್ಸ್‌ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವುದು ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

ಆದುದರಿಂದ ದಿನಾಂಕ 23.01.2025 ರಿಂದ 17.02.2025 ರವರೆಗೆ ಎಲ್ಲ ಮಾಂಸಾಹಾರ ಮಾರಾಟ ಉದ್ದಿಮೆಗಳನ್ನು ಮುಚ್ಚಲು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937ರ ರೂಲ್ 91 ರಂತೆ ಮತ್ತು ಇತರ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments