Homeಕರ್ನಾಟಕಬೆಂಗಳೂರು | ಕೋರಮಂಗಲದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು | ಕೋರಮಂಗಲದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಕೇಸ್ ದಾಖಲಾಗಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಮೂಲದ ಮೂವರು ಆರೋಪಿಗಳಾದ ಅಜಿತ್, ವಿಶ್ವಾಸ್, ಶಿವು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಓರ್ವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರಿನ ಕೋರಮಂಗಲ ಸಮೀಪ ಇರುವ ಖಾಸಗಿ ಕಾಲೇಜು ಬಳಿ ಮಹಿಳೆಯೊಬ್ಬರು ಬರುತ್ತಿದ್ದಾಗ, ಹತ್ತಿರದ ಹೋಟೆಲ್‌ನಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸುಮಾರು ಮಧ್ಯರಾತ್ರಿ 12:30 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ಮದ್ಯಪಾನ ಮಾಡಿ ಖಾಸಗಿ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿ, ನಂತರ ರಾಬರಿ ಕೂಡಾ ಮಾಡಿದ್ದಾರೆ ಎನ್ನಲಾಗಿದೆ.

ರಸ್ತೆಯಲ್ಲಿ ನಡೆದುಕೊಂಡು ಬರುವಾಗ ತಡರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಮಹಿಳೆಯನ್ನು ನಾಲ್ವರು ಭೇಟಿ ಮಾಡಿದ್ದಾರೆ. ನಂತರ ಹಳೆ ಪರಿಚಯಸ್ಥರ ರೀತಿ ಮಾತನಾಡಿ ಕರೆದುಕೊಂಡು ಹೋಗಿದ್ದಾರೆ. ಮುಚ್ಚಿ ಹೋಗಿದ್ದ ಹೋಟೆಲ್​ ಒಂದರ ಟೆರೇಸ್​ ಮೇಲೆ ಕರೆದುಕೊಂಡು ಹೋಗಿ ಊಟ ಮಾಡಿದ್ದಾರೆ.

ಬಳಿಕ ನಾಲ್ವರು ಸೇರಿ ಅತ್ಯಾಚಾರ ಎಸಗಿದ್ದಾರೆ. ಬೆಳಗ್ಗೆ ಐದು ಘಂಟೆ ಸುಮಾರಿಗೆ ಮೊಬೈಲ್, ಪರ್ಸ್ ಕಿತ್ತುಕೊಂಡು ಮಹಿಳೆಯನ್ನು ಆರೋಪಿಗಳು ಓಡಿಸಿದ್ದಾರೆ. ಘಟನೆ ಬಳಿಕ 122 ಕರೆ ಮಾಡಿದ ಮಹಿಳೆ ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments