Homeಕರ್ನಾಟಕಬೆಂಗಳೂರು ಟೆಕ್ ಶೃಂಗಸಭೆ | ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ಟೆಕ್ ಶೃಂಗಸಭೆ | ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಬೆಂಗಳೂರು ಟೆಕ್ ಶೃಂಗಸಭೆ 2024ರ 27ನೇ ಆವೃತ್ತಿ ಉದ್ಘಾಟಿಸಿ ಮಾತನಾಡಿದರು.

“ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸಧೃಢಗೊಳಿಸುತ್ತದೆಯಲ್ಲದೆ ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲಿದೆ” ಎಂದರು.

“20ನೇ ಶತಮಾನದ ಆರಂಭದಲ್ಲಿ , ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು. 2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು” ಎಂದು ಹೇಳಿದರು.

“ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ. ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ ಉತ್ತೇಜಿಸಿದೆ” ಎಂದು ಹೇಳಿದರು.

“ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಹೋಲಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ.ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ ಜಿಸಿಸಿಗಳನ್ನು ಸ್ಥಾಪಿಸಲು ಈ ಪಾರ್ಕ್ ಗಳು ಮೀಸಲಾಗಿರುತ್ತದೆ” ಎಂದರು.

“ಬೆಂಗಳೂರು ಜಾಗತಿಕ ನಾವೀನ್ಯತಾ ಜಿಲ್ಲೆಯು ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಯ ನಗರದ ಭಾಗವಾಗಿರಲಿದೆ(ಕ್ವಿನ್ ಸಿಟಿ). ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 45 ನಿಮಿಷಗಳ ಅಂತರದಲ್ಲಿದ್ದು, ನಾವೀನ್ಯತೆ ಮತ್ತು ಸಂಶೋಧನೆಗೆ ಜಾಗತಿಕ ಕೇಂದ್ರವಾಗಿ ಪರಿಣಮಿಸಲಿದೆ. ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ ಅತ್ಯಧಿಕ ಎ ಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತಿ ಪ್ರಿಯವಾದ ಗಮ್ಯವಾಗಿದೆ. ಎನ್ ಐ ಪಿ ಯು ಎನ್ ಎ ಕರ್ನಾಟಕದಡಿಯಲ್ಲಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು ನಾವು ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ. ಈಗ ತಾನೇ ಮೈಕ್ರೋ ಸಾಫ್ಟ್, ಇಂಟೆಲ್ , ಆಕ್ಸೆಂಚರ್ , ಐ.ಬಿ.ಎಂ ಮತ್ತು ಬಿ ಎಫ್ ಎಸ್ ಕಾಂಸಾರ್ಟಿಯಂ ಜೊತೆಗೆ ಸಹಿ ಹಾಕಲಾದ ಐದು ಒಪ್ಪಂದಗಳು ಕರ್ನಾಟಕದ ಒಂದು ಲಕ್ಷ ವ್ಯಕ್ತಿಗಳನ್ನು ಕೌಶಲಯುಕ್ತ ಗೊಳಿಸಲಿದೆ” ಎಂದು ವಿವರಿಸಿದರು.

ಗ್ರಾಮೀಣ ಸಂಪರ್ಕಕ್ಕಾಗಿ ‘ನಮ್ಮ ಗ್ರಾಮ ನಮ್ಮ ಯೋಜನೆ ‘ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳು ಸಂಪರ್ಕ ಮತ್ತು ಆರ್ಥಿಕ ಅವಕಾಶಗಳನ್ನು ಕರ್ನಾಟಕದಾದ್ಯಂತ ವೃದ್ಧಿಸಿದೆ. ಬಿಯಾಂಡ್ ಬೆಂಗಳೂರು ಕಾರ್ಯಕ್ರಮಗಳ ಮೂಲಕ ಬೆಳವಣಿಗೆಯ ಸೌಲಭ್ಯಗಳನ್ನು ಟೆಕ್ ವಲಯದಿಂದಾಚೆಗೂ ಕೊಂಡೊಯ್ಯುವುದರಲ್ಲಿ ನಮಗೆ ನಂಬಿಕೆಯಿದೆ. ಇದರಿಂದ ಗ್ರಾಮೀಣ ಪ್ರದೇಶಗಳಿಗೆ ತಂತ್ರಜ್ಞಾನ, ವಿದ್ಯಾರ್ಥಿಗಳಿಗೆ ಇ – ಶಿಕ್ಷಣದ ಸುಧಾರಣೆ ಮತ್ತು ಎಲ್ಲಾ ನಾಗರಿಕ ಸೇವೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ” ಎಂದು ಹೇಳಿದರು.

“ಈ ಪರಂಪರೆಯನ್ನು ವಿಸ್ತರಿಸಲು ನಾವು ಬದ್ಧರಾಗಿದ್ದು, ತಂತ್ರಜ್ಞಾನ ಮತ್ತು ಪ್ರಗತಿಯಲ್ಲಿ ಕರ್ನಾಟಕವು ಜಾಗತಿಕ ನಾಯಕನಾಗಿ ಉಳಿಯಲಿರುವುದನ್ನು ಖಾತ್ರಿಪಡಿಸುತ್ತೇವೆ. ನಾವೀನ್ಯತೆ, ಸಹಯೋಗ ಮತ್ತು ಬೆಳವಣಿಗೆಯ ಈ ಪ್ರಯಾಣದಲ್ಲಿ ನಮ್ಮೊಂದಿಗೆ ಕೈಜೋಡಿಸಿದ್ದಕ್ಕಾಗಿ ಧನ್ಯವಾದಗಳು. ಒಟ್ಟಾಗಿ, ನಾವು ಕರ್ನಾಟಕ ಮತ್ತು ಅದರಾಚೆಗಿನ ಪರಿವರ್ತನೆಯನ್ನು ಮುಂದುವರಿಸೋಣ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments