ಬೆಂಗಳೂರು: ಚಿನ್ನದ ಅಂಗಡಿಗೆ ನುಗ್ಗಿರುವ ಕಳ್ಳರು ಲಾಕರ್‌ನಲ್ಲಿದ್ದ 250 ಗ್ರಾಂ ಚಿನ್ನ, 1.8 ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಬಸವನಗುಡಿಯ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ನಡೆದಿದೆ.
ಬಸವನಗುಡಿ ಪೊಲೀಸ್ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಬೆನಕ ಗೋಲ್ಡ್‌ನ ಮೂರು ಕಬ್ಬಿಣದ ಗೇಟ್ ಬೀಗ ಮುರಿದು ಕಳ್ಳತನ ಮಾಡಲಾಗಿದೆ.
ಎಂದಿನಂತೆ ನಿನ್ನೆ ವ್ಯವಹಾರ ಮಾಡಿದ್ದ ಕಂಪನಿಯ ಸಿಬ್ಬಂದಿ ಗ್ರಾಹಕರಿಂದ ಚಿನ್ನಭರಣ ಖರೀದಿ ಮಾಡಿತ್ತು. ಮಧ್ಯರಾತ್ರಿ ಅಂಗಡಿಗೆ ನುಗ್ಗಿದ ಕಳ್ಳರು ಚಿನ್ನ, ಹಣ ದೋಚಿ ಪರಾರಿಯಾಗಿದ್ದಾರೆ.
ಕಳ್ಳತನ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್ ಅನ್ನು ಪುಡಿ ಮಾಡಿದ್ದಾರೆ. ಬಸವನಗುಡಿ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.