ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ ಸೇವಾ ಸಂಕಲ್ಪ ಅಭಿಯಾನ ಆಯೋಜನಾ ಸಮಿತಿ, ಚಿತ್ರದುರ್ಗ ಜಿಲ್ಲೆ ವತಿಯಿಂದ ‘ಮಾದಿಗ ಕಾರ್ಯಕರ್ತರ ಜಿಲ್ಲಾ ಸಮಾವೇಶ–2026’ ಹಾಗೂ ‘ಮಾದಿಗ ಮುನ್ನಡೆ–II: ಒಳಮೀಸಲಾತಿ ಕಗ್ಗಂಟು ಬಿಡಿಸಿದ ನರೇಂದ್ರ ಮೋದಿ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾದರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ. ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವರಾದ ಎ. ನಾರಾಯಣಸ್ವಾಮಿ, ಜಿ.ಎಂ. ಸಿದ್ದೇಶ್ವರ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಸೇರಿದಂತೆ ಹಲವು ಗಣ್ಯರು, ಮುಖಂಡರು ಹಾಗೂ ಮಾದಿಗ ಸಮುದಾಯದ ಕಾರ್ಯಕರ್ತರು ಭಾಗವಹಿಸಿದ್ದರು.
ಸಮಾವೇಶದಲ್ಲಿ ಮಾದಿಗ ಸಮುದಾಯದ ಸಂಘಟನೆ, ಸಾಮಾಜಿಕ ಹಾಗೂ ರಾಜಕೀಯ ಪ್ರಾತಿನಿಧ್ಯ, ಒಳಮೀಸಲಾತಿ ಸೇರಿದಂತೆ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಒಳಮೀಸಲಾತಿ ವಿಚಾರದಲ್ಲಿ ಕೈಗೊಂಡ ಕ್ರಮಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಲಾಯಿತು.


