Homeಕರ್ನಾಟಕಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ಬಸವರಾಜ ರಾಯರೆಡ್ಡಿ ನೇಮಕ

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ಬಸವರಾಜ ರಾಯರೆಡ್ಡಿ ನೇಮಕ

ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ.

ಈ ಕುರಿತು ಶುಕ್ರವಾರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.

ರಾಯರಡ್ಡಿ ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ.

ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದ ರಾಯರೆಡ್ಡಿ ಅವರ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಸಿದ್ದರಾಮಯ್ಯ ಮಾಡಿದ್ದಾರೆ ಎನ್ನಲಾಗಿದೆ.

ಅಸಮಾಧಾನಗೊಂಡಿದ್ದ ರಾಯರೆಡ್ಡಿ ಅವರು ಸಚಿವರ ವಿರುದ್ಧ ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಸರ್ಕಾರಕ್ಕೆ ಮುಜುಗರ ತರುತ್ತಿದ್ದರು. ಇತ್ತೀಚೆಗೆ ಪಕ್ಷದ ವರಿಷ್ಠರು ನಿಗಮ ಮಂಡಳಿ ಸ್ಥಾನಮಾನ ನೀಡುವುದಾಗಿ ಹೇಳಿದ್ದರೂ ನಯವಾಗಿ ತಿರಸ್ಕರಿಸಿದ್ದರು. ಈಗ ಸರ್ಕಾರ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿದೆ.

“ವೈಯಕ್ತಿವಾಗಿ ಯಾರ ಬಗ್ಗೆಯೂ ಅಸಮಾಧಾನವಿಲ್ಲ. ಕ್ಷೇತ್ರದ ಕೆಲಸ ಮಾಡಿಕೊಂಡು ಹೋಗುತ್ತಿದ್ದೆ. ಈಗ ಮುಖ್ಯಮಂತ್ರಿಯೇ ಜವಾಬ್ದಾರಿ ನೀಡಿದ್ದಾರೆ. ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಣೆ ಮಾಡುವೆ. ಅವಕಾಶ ಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸುವೆ” ಎಂದು ರಾಯರಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments