HomeUncategorizedಬಿಬಿಎಂಪಿ ಇನ್ನು ನೆನಪು ಮಾತ್ರ, ಇಂದಿನಿಂದ ಗ್ರೇಟರ್​​ ಬೆಂಗಳೂರು ಆಡಳಿತ ಅಸ್ತಿತ್ವಕ್ಕೆ

ಬಿಬಿಎಂಪಿ ಇನ್ನು ನೆನಪು ಮಾತ್ರ, ಇಂದಿನಿಂದ ಗ್ರೇಟರ್​​ ಬೆಂಗಳೂರು ಆಡಳಿತ ಅಸ್ತಿತ್ವಕ್ಕೆ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಇನ್ಮುಂದೆ ನೆನಪು ಮಾತ್ರ. ಇಂದಿನಿಂದ (ಮೇ 15) ಗ್ರೇಟರ್​​ ಬೆಂಗಳೂರು ಆಡಳಿತ (Greater Bangalore Authority) ಕಾಯಿದೆ ಅಂದರೆ ಜಿಬಿಎ ಅಸ್ತಿತ್ವಕ್ಕೆ ಬರಲಿದೆ.

ಸದ್ಯ ಬಿಬಿಎಂಪಿ ವಿಸರ್ಜನೆಯಾಗಿದ್ದು, 3 ಭಾಗಗಳಾಗಿ ಬೆಂಗಳೂರು ವಿಂಗಡಣೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಸೇರಿ ಮೂರು ಭಾಗಗಳಾಗಿ ವಿಂಗಡಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಪ್ರತೀ ಪಾಲಿಕೆಯಲ್ಲೂ‌125 ವಾರ್ಡ್ ಗಳು ಇರಲಿವೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆಯನ್ನು ಮೇ 15ರಂದು ಜಾರಿಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ತುಷಾರ್ ಗಿರಿನಾಥ್ ಗುರುವಾರದಿಂದ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಜಿ) ಕಾಯ್ದೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರಿನಿಂದ ಸಿಲಿಕಾನ್ ಸಿಟಿಯ ವ್ಯಾಪ್ತಿ ಕೂಡ ಹಿರಿದಾಗಲಿದೆ. ನಗರದ ಕೈಗಾರಿಕಾ ಪ್ರದೇಶ ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಅತ್ತಿಬೆಲೆ, ಬಾಗಲೂರು, ಬೊಮ್ಮಸಂದ್ರ, ಹೆಸರಘಟ್ಟ, ಹಾರೋಹಳ್ಳಿ, ದಾನಸಪುರ, ಕುಂಬಳಗೋಡು ಸೇರಿದಂತೆ ಹಲವು ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಗೆ ಸೇರಿಸಿಕೊಳ್ಳಲಿದೆ. ಗ್ರೇಟರ್ ಬೆಂಗಳೂರಿನಲ್ಲಿ ಹಲವು ಬದಲಾವಣೆ ಸಾಧ್ಯತೆ ಇದ್ದು,ಕಟ್ಟಡಗಳ ಗಾತ್ರ, ಎತ್ತರ ನಿಯಮಗಳು ಬದಲಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments