Homeಕರ್ನಾಟಕವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

ಭಾರತೀಯ ಕ್ರಿಕೆಟ್ ತಂಡದ ದಿಗ್ಗಜ ಹಾಗೂ ಸ್ಟೈಲಿಶ್ ಆಟಗಾರ ವಿರಾಟ್ ಕೊಹ್ಲಿ ಕೇವಲ ಕ್ರೀಡಾಪಟುವಾಗಿ ಮಾತ್ರವಲ್ಲ ಯಶಸ್ವಿ ಉದ್ಯಮಿಯಾಗಿಯೂ ಗಮನ ಸೆಳೆದಿದ್ದಾರೆ.

ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡಿರುವ ಅವರು ಬೆಂಗಳೂರಿನಲ್ಲಿ ಪಾಲುದಾರಿಕೆ ಯೊಂದಿಗೆ
ಒನ್ 8 ಕಮ್ಯೂನ್ (One And Commune) ಬಾರ್ & ರೆಸ್ಟೋರೆಂಟ್‌ ನಡೆಸುತ್ತಿದ್ದಾರೆ. ಆದರೆ ಈ ಬಾರ್ ಅಂಡ್ ರೆಸ್ಟೋರೆಂಟ್ ಮಹಾನಗರ ಪಾಲಿಕೆ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ನೋಟಿಸ್ ನೀಡಿದೆ.

ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ನಿಯಮಗಳು ಪಾಲಿಸಲಾಗಿಲ್ಲ ಎಂಬ ಕುರಿತಂತೆ ಸ್ಥಳೀಯರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ದೂರು ನೀಡಿದ್ದರು ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ನೋಟಿಸ್ ನೀಡಿದ್ದಾರೆ.

ಇದೇ ಕಾರಣಕ್ಕಾಗಿ ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ದರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿ ಕೇಳಲಾಗಿದೆ. ಇದಕ್ಕೆ ಸೂಕ್ತ ಉತ್ತರ ಬಾರದೆ ಇದ್ದಲ್ಲಿ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments