Homeಕರ್ನಾಟಕಬಳ್ಳಾರಿ | ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬಳ್ಳಾರಿ | ಬಾಣಂತಿಯರ ಸಾವಿಗೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಪರಿಹಾರದ ಮೊತ್ತವನ್ನು ಸರ್ಕಾರ ಐದು ಲಕ್ಷಕ್ಕೆ ಏರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮೃತ ಬಾಣಂತಿಯರ ಕುಟುಂಬಗಳಿಗೆ ಈಗಾಗಲೇ ಮೊದಲು ₹ 2 ಲಕ್ಷ ಪರಿಹಾರ ಘೋಷಿಸಲಾಗಿತ್ತು. ಈ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಲಾಗಿದೆ” ಎಂದು ತಿಳಿಸಿದರು.

“ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತಿಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ” ಎಂದರು.

“ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ” ಎಂದು ಹೇಳಿದರು.

“ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ” ಎಂದರು.

“2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ. ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು” ಎಂದು ವಿವರಿಸಿದರು.

ರಿಪಬ್ಲಿಕ್ ಬಳ್ಳಾರಿ ಮಾಡಿದ ರೆಡ್ಡಿ

“ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ” ಎಂದರು.

“ಇವತ್ತಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ” ಎಂದು ಪ್ರಶ್ನಿಸಿದರು.

ನಿಮ್ಮ ಆಶೀರ್ವಾದ ಇರುವವರೆಗೂ ಬಗ್ಗಲ್ಲ-ಜಗ್ಗಲ್ಲ

“ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ” ಎಂದು ಪುನರುಚ್ಚರಿಸಿದರು.

ನಾಚಿಕೆ ಇಲ್ಲದೆ ಸುಳ್ಳು ಹೇಳ್ತಾರೆ

“ವಕ್ಫ್ ವಿಚಾರದಲ್ಲೂ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಲೋಕಲ್ ಲೀಡರ್ ಗಳ ವರೆಗೂ ಎಲ್ಲರೂ ಸರಣಿ ಸುಳ್ಳು ಅಪಪ್ರಚಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ 700 ಕೋಟಿ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡಿದರು. ನಾನು ಪ್ರಧಾನಿಗೆ ಸವಾಲು ಹಾಕಿದೆ, ನಿಮ್ಮ ಆರೋಪ ಸಾಬೀತು ಮಾಡಿ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ಮಾಡಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ” ಎಂದು ವ್ಯಂಗ್ಯವಾಡಿದರು.

ಸಂಡೂರಿಗೆ 2 ಸಾವಿರ ಮನೆ ಬಂಪರ್

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಡೂರು ಜನತೆಗೆ ಅಭಿನಂದಿಸಿ ಭಾಷಣ ಮಾಡುವ ವೇಳೆ ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡುವುದಾಗಿ ಘೋಷಿಸಿದರು. ಈಗಾಗಲೇ 2172 ಮನೆಗಳನ್ನು ನೀಡಲಾಗಿದೆ‌. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments