Homeಕರ್ನಾಟಕ‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ: ಕೇಂದ್ರ ಅನುದಾನ ಶೀಘ್ರ ಬಿಡುಗಡೆಗೆ ಸಚಿವ ಯತೀಂದ್ರ...

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ: ಕೇಂದ್ರ ಅನುದಾನ ಶೀಘ್ರ ಬಿಡುಗಡೆಗೆ ಸಚಿವ ಯತೀಂದ್ರ ಮನವಿ

ದೇಶದ ಆಯ್ದ 50 ನಗರಗಳನ್ನು ಮಾದರಿ ಸ್ವಚ್ಛ ನಗರಗಳಾಗಿ ರೂಪಿಸುವ ‘ಪ್ರಗತಿ 50’ (PRAGATI 50) ಉಪಕ್ರಮಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದ್ದು, ಈ ಮಹತ್ವದ ಯೋಜನೆಗೆ ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ನಗರಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛ ಭಾರತ ಮಿಷನ್–ನಗರ 2.0ರ ಹೊಸ ಕಾರ್ಯಕ್ರಮಗಳನ್ನು ಬಲಪಡಿಸುವ ಕುರಿತು ನಡೆದ ವೀಡಿಯೊ ಸಂವಾದ ಸಭೆಯಲ್ಲಿ ಸಚಿವರು ಭಾಗವಹಿಸಿದರು.

ಸಭೆಯಲ್ಲಿ ‘ಪ್ರಗತಿ 50’ ಉಪಕ್ರಮಕ್ಕೆ ಚಾಲನೆ ನೀಡಿರುವುದನ್ನು ಸ್ವಾಗತಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯದ ಬೆಂಗಳೂರು ಮತ್ತು ಮೈಸೂರು ನಗರಗಳು ಯೋಜನೆಗೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ರಾಜ್ಯದ ನಗರಾಭಿವೃದ್ಧಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಪ್ರಮುಖ ಬೇಡಿಕೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಿದರು.

ಮಾದರಿ ನಗರಗಳ ಅಭಿವೃದ್ಧಿ ಸೇರಿದಂತೆ ವಿವಿಧ ಪ್ರಮುಖ ನಗರಾಭಿವೃದ್ಧಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಅನುದಾನದ ಪಾಲು ಅತ್ಯಂತ ಅಗತ್ಯವಾಗಿದೆ ಎಂದು ಸಚಿವರು ತಿಳಿಸಿ, ಬಾಕಿ ಇರುವ ಕೇಂದ್ರದ ಪಾಲಿನ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ರಾಜ್ಯದ ನಗರಾಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಸೇರಿದಂತೆ ಇತರ ಅಭಿವೃದ್ಧಿ ವಿಷಯಗಳ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಕೇಂದ್ರ ಸಚಿವರೊಂದಿಗೆ ಭೇಟಿಗೆ ಸಮಯ ಕೋರಲಾಗಿದ್ದು, ಶೀಘ್ರದಲ್ಲೇ ಭೇಟಿಗೆ ಸಮಯ ನಿಗದಿಪಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಈ ಉನ್ನತ ಮಟ್ಟದ ವೀಡಿಯೊ ಸಂವಾದ ಸಭೆಯಲ್ಲಿ ವಿವಿಧ ರಾಜ್ಯಗಳ ನಗರಾಭಿವೃದ್ಧಿ ಸಚಿವರು, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಸತ್ಯೇಂದ್ರ ಸಿಂಗ್ ಹಾಗೂ ಸ್ವಚ್ಛ ಭಾರತ ಮಿಷನ್ ರಾಷ್ಟ್ರೀಯ ನಿರ್ದೇಶಕಿ ಡಾ. ಶಾಲಿನಿ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments