Homeಕರ್ನಾಟಕಭದ್ರಾ ಮೇಲ್ದಂಡೆ ಯೋಜನೆಯ ಘೋಷಿತ ಅನುದಾನ ಕೇಂದ್ರ ಬಿಡುಗಡೆ ಮಾಡಲಿ: ಎಚ್‌ ಕೆ ಪಾಟೀಲ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆಯ ಘೋಷಿತ ಅನುದಾನ ಕೇಂದ್ರ ಬಿಡುಗಡೆ ಮಾಡಲಿ: ಎಚ್‌ ಕೆ ಪಾಟೀಲ ಆಗ್ರಹ

2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಸಚಿವ ಎಚ್‌ ಕೆ ಪಾಟೀಲ ಆಗ್ರಹಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕೇಂದ್ರ ಸರ್ಕಾರವು 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟ್ರೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ” ಎಂದು ಹೇಳಿದರು.

ಕೇದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾನೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೆಟು ಹಾಕುತ್ತಿದೆ” ಎಂದು ದೂರಿದರು.

“ಈ ಕುರಿತು ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 03.08.2024 ರಂದು, 19.06.2024 ರಂದು ಹಾಗೂ 16.08.2023 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯ, ಕೇಂದ್ರ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿರುವ ಯೋಜನೆಗೆ ಈಗ ನಿರಾಕರಿಸಿದೆ. ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ” ಎಂದರು.

“ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಹಾಗೂ ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು” ಎಂದು ಸಚಿವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments