ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಚನ್ನಪಟ್ಟಣದಲ್ಲಿ ಬಹೃತ್ ಮೆರವಣಿಗೆ ಮೂಲಕ ಸಾಗಿಬಂದು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವಾಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಯಧುವೀರ್ ಒಡೆಯರ್, ನಿಖಿಲ್ ಪತ್ನಿ ರೇವತಿ ಮೆರವಣಿಗೆಯಲ್ಲಿ ಸಾಥ್ ನೀಡಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ ಬೆಂಗಳೂರಿನ ಜೆಪಿ ನಗರದ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಹೆಚ್ ಡಿ ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಅವರು ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವರು. ಬಳಿಕ ಜೆ.ಪಿ ನಗರದ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಭರತ್ ಬೊಮ್ಮಾಯಿ ರೋಡ್ ಶೋ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ರೋಡ್ ಶೋ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಮುರುಗೇಶ ನಿರಾಣಿ, ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಸಂಸದ ಬಸವರಾಜ ಬೊಮ್ಮಾಯಿ ಅವರು ಸವಣೂರು ತಾಲೂಕಿನ ಕಾರಡಗಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಹಾಗೆಯೇ ಶಿಗ್ಗಾಂವಿ ತಾಲೂಕಿನ ತಡಸ್ ಕ್ರಾಸ್ ಬಳಿ ಇರುವ ಗಾಯತ್ರಿ ತಪೊಭೂಮಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
