Homeಕರ್ನಾಟಕಸಿದ್ದರಾಮಯ್ಯಗೆ ಬಿಗ್‌ ರಿಲೀಪ್‌, ಸಿಬಿಐ ತನಿಖೆಗೆ ಮುಡಾ ಪ್ರಕರಣ ಕೊಡಲು ನಿರಾಕರಿಸಿದ ಹೈಕೋರ್ಟ್

ಸಿದ್ದರಾಮಯ್ಯಗೆ ಬಿಗ್‌ ರಿಲೀಪ್‌, ಸಿಬಿಐ ತನಿಖೆಗೆ ಮುಡಾ ಪ್ರಕರಣ ಕೊಡಲು ನಿರಾಕರಿಸಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸಲು ಧಾರವಾಡದ ಹೈಕೋರ್ಟ್‌ ಪೀಠ ನೀರಾಕರಿಸಿ ಆದೇಶ ನೀಡಿದೆ.

ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತೀರ್ಪು ಪ್ರಕಟಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಕರಣದಲ್ಲಿ ಬಿಗ್‌ ರಿಲೀಪ್‌ ಸಿಕ್ಕಂತಾಗಿದೆ.

ಅರ್ಜಿ ವಿಚಾರಣೆಯನ್ನು ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಲೋಕಾಯುಕ್ತವೇ ತನಿಖೆ ಮುಂದುವರಿಸಲಿ ಎಂದು ಹೇಳುವ ಮೂಲಕ ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮಣೀಂದ್ರ್ ಸಿಂಗ್, ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಸಿದ್ದರಾಮಯ್ಯ ಪತ್ನಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು.

ಪ್ರಕರಣ ಸಂಬಂಧ ಅರ್ಜಿದಾರರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮುಡಾದಿಂದ ನಿವೇಶನಗಳನ್ನು ಅಕ್ರಮವಾಗಿ ಪಡೆದಿರುವ ಆರೋಪವಿದೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿ ಆಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಸ್ನೇಹಮಯಿ ಕೃಷ್ಣ ಕೋರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments