Homeಕರ್ನಾಟಕಬಿಜೆಪಿಯಿಂದ ಕೋಮು ಗಲಭೆ ನಡೆಸಲು ಪುನೀತ್ ಕೆರೆಹಳ್ಳಿಗೆ ಫತ್ವಾ ಬಂದಿದೆ: ಬಿ ಕೆ ಹರಿಪ್ರಸಾದ್‌

ಬಿಜೆಪಿಯಿಂದ ಕೋಮು ಗಲಭೆ ನಡೆಸಲು ಪುನೀತ್ ಕೆರೆಹಳ್ಳಿಗೆ ಫತ್ವಾ ಬಂದಿದೆ: ಬಿ ಕೆ ಹರಿಪ್ರಸಾದ್‌

ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದು, “ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳಿಗೆ ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ” ಎಂದಿದ್ದಾರೆ.

“ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತುಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments