Homeಕರ್ನಾಟಕವಕ್ಫ್ ಆಸ್ತಿಯೆಂದು ನೋಟಿಸ್ ಕೊಟ್ಟಿದ್ದೇ ಬಿಜೆಪಿ ಸರಕಾರ: ಎಂ ಬಿ ಪಾಟೀಲ

ವಕ್ಫ್ ಆಸ್ತಿಯೆಂದು ನೋಟಿಸ್ ಕೊಟ್ಟಿದ್ದೇ ಬಿಜೆಪಿ ಸರಕಾರ: ಎಂ ಬಿ ಪಾಟೀಲ

ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಆದರೆ 2019ರಿಂದ 2022ರವರೆಗೆ ರಾಜ್ಯದಲ್ಲಿ ಅವರದೇ ಸರಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು. ಆಗ ಇರದ ಹಿಂದೂ ಪ್ರೇಮವನ್ನು ಈಗ ಕಪೋಲಕಲ್ಪಿತ ಸುಳ್ಳುಗಳ ಮೂಲಕ ವ್ಯಕ್ತಪಡಿಸಲಾಗುತ್ತಿದೆ ಎಂದು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಸಂಬಂಧವಾಗಿ ಅವರು ಬಿಜೆಪಿ ಆಡಳಿತದ ಕಾಲದ ನೋಟಿಸ್‌ಗಳೊಂದಿಗೆ, `ಎಕ್ಸ್’ನಲ್ಲಿ ತೀಕ್ಷ್ಣ ಸಂದೇಶ ಹಾಕಿದ್ದಾರೆ.

“ಬಿಜೆಪಿಯವರು ತಮ್ಮದೇ ಸರಕಾರವಿದ್ದಾಗ ರಾಜ್ಯದ ಅಭಿವೃದ್ಧಿಯನ್ನು ಮರೆತು ಹಿಜಾಬ್, ಹಲಾಲ್, ಉರಿಗೌಡ-ನಂಜೇಗೌಡ ಎಂದು ನಾಟಕವಾಡಿದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಆ ನಾಟಕವನ್ನು ಮುಂದುವರಿಸಲಾಗುತ್ತಿದೆ. ಸುಳ್ಳಿನ ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ” ಎಂದು ಅವರು ಕುಟುಕಿದ್ದಾರೆ.

“ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರಚಿಸಿರುವ ಸತ್ಯ ಶೋಧನಾ ಸಮಿತಿಯನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ ಯತ್ನಾಳ ಅವರು ಹಿಗ್ಗಾಮುಗ್ಗಾ ಟೀಕಿಸಿದ ಮೇಲೆ ಪುನಾರಚಿಸಲಾಗಿದೆ. ಇಷ್ಟೆಲ್ಲ ಆದಮೇಲೆ ಯತ್ನಾಳ್ ಜೊತೆಗೆ ಸಂಸದ ರಮೇಶ ಜಿಗಜಿಣಗಿ ಅವರುಗಳನ್ನು ಸೇರಿಸಿದಂತೆ ನಟಿಸಲಾಗಿದೆ. ಇದು ಆ ಪಕ್ಷದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಇದನ್ನು ಬಿಟ್ಟು, ತಮ್ಮ ಸರಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕೊಟ್ಟ ನೋಟಿಸುಗಳಿಗೆ ಮೊದಲು ಉತ್ತರ ಕೊಡಲಿ” ಎಂದು ಅವರು ಆಗ್ರಹಿಸಿದ್ದಾರೆ.

“ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ಹೇಳಿ ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವ ಬಿಜೆಪಿ ನಾಯಕರು ತಮ್ಮ ನಡುವೆ ಇರುವ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ” ಎಂದು ವ್ಯಂಗ್ಯವಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments