Homeಕರ್ನಾಟಕಸಿಎಂ ವಿರುದ್ಧ ಬಿಜೆಪಿ ದ್ವೇಷ; ಕಾನೂನು ಮೂಲಕವೇ ಉತ್ತರಿಸುತ್ತೇವೆ: ಬಿ ಕೆ ಹರಿಪ್ರಸಾದ್‌

ಸಿಎಂ ವಿರುದ್ಧ ಬಿಜೆಪಿ ದ್ವೇಷ; ಕಾನೂನು ಮೂಲಕವೇ ಉತ್ತರಿಸುತ್ತೇವೆ: ಬಿ ಕೆ ಹರಿಪ್ರಸಾದ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಹರಿಹಾಯ್ದಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ” ಎಂದು ಕುಟುಕಿದ್ದಾರೆ.

“ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣವನ್ನು ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments