Homeಕರ್ನಾಟಕಬಿಜೆಪಿಯವರು ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ: ಸಿದ್ದರಾಮಯ್ಯ

ಬಿಜೆಪಿಯವರು ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ: ಸಿದ್ದರಾಮಯ್ಯ

ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

“ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು” ಎಂದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ

“ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ” ಎಂದರು.

“ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ” ಎಂದು ಹೇಳಿದರು.

ಮೋದಿಯವರು ಬಂಡವಾಳಶಾಹಿಗಳ ಪರ

“ಬಿಜೆಪಿಯವರು ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments