Homeಕರ್ನಾಟಕಬಿಜೆಪಿ ಖಾಸಗಿ ಎಫ್‌ಎಸ್‌ಎಲ್‌ ವರದಿ ತಂದಿಟ್ಟು ಜನರ ದಿಕ್ಕು ತಪ್ಪಿಸುತ್ತಿದೆ: ಸಿದ್ದರಾಮಯ್ಯ ಕಿಡಿ

ಬಿಜೆಪಿ ಖಾಸಗಿ ಎಫ್‌ಎಸ್‌ಎಲ್‌ ವರದಿ ತಂದಿಟ್ಟು ಜನರ ದಿಕ್ಕು ತಪ್ಪಿಸುತ್ತಿದೆ: ಸಿದ್ದರಾಮಯ್ಯ ಕಿಡಿ

ಖಾಸಗಿ ಸಂಸ್ಥೆಗಳ ಎಪ್‌ಎಸ್‌ಎಲ್‌ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿ ಖಾಸಗಿ ಸಂಸ್ಥೆಯೊಂದರ ಎಫ್‌ಎಸ್‌ಎಲ್‌ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಕಿಡಿಕಾರಿದರು.

“ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು” ಎಂದರು.

“ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments