ಚುನಾವಣಾ ಆಯೋಗವನ್ನು ಬಳಸಿಕೊಂಡು ಮತಗಳ್ಳತನದ ಮೂಲಕ ಚುನಾವಣೆಗಳನ್ನು ಗೆಲ್ಲಲು, ಆ ಮೂಲಕ ದೇಶದ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡಲು ಕೇಂದ್ರದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
“ಮಹಾರಾಷ್ಟ್ರದಲ್ಲಿ ಮತಗಳ್ಳತನ ನಡೆಯಿತು. ಆ ಮೂಲಕವೇ ಬಿಜೆಪಿ ಅಲ್ಲಿ ಗೆಲುವು ಸಾಧಿಸಿತು. ಈಗ ಬಿಹಾರದಲ್ಲಿಯೂ ಚುನಾವಣಾ ಆಯೋಗದ ಮೂಲಕವೇ ಅಕ್ರಮಗಳನ್ನು ನಡೆಸುತ್ತಿದೆ. ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿಯೂ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಗಳು ಲಭ್ಯವಿದೆ” ಎಂದು ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ.
“ಆ ಅಕ್ರಮಗಳ ವಿರುದ್ಧ ರಾಹುಲ್ ಗಾಂಧಿಯವರು ಸಮರ ಸಾರಿದ್ದಾರೆ. ಇದೇ ಆಗಸ್ಟ್ 8 ರಂದು ಚುನಾವಣಾ ಆಯೋಗದ ಮತಗಳ್ಳತನದ ವಿರುದ್ಧ ಪ್ರತಿಭಟಿಸಲು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನೀವೂ ಬನ್ನಿ, ಪ್ರಜಾಪ್ರಭುತ್ವವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.