Homeಕರ್ನಾಟಕಶಾಸಕರ ಭವನದಿಂದ ವಿಧಾನಸೌಧದವರೆಗೆ ಬಿಜೆಪಿ-ಜೆಡಿಎಸ್‌ ಶಾಸಕರಿಂದ ಪಾದಯಾತ್ರೆ

ಶಾಸಕರ ಭವನದಿಂದ ವಿಧಾನಸೌಧದವರೆಗೆ ಬಿಜೆಪಿ-ಜೆಡಿಎಸ್‌ ಶಾಸಕರಿಂದ ಪಾದಯಾತ್ರೆ

ಬಜೆಟ್‌ ಅಧಿವೇಶನ ಆರಂಭಕ್ಕೂ ಮುನ್ನ ಶಾಸಕರ ಭವನದಿಂದ ವಿಧಾನಸೌಧಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಸೋಮವಾರ ರಾಜ್ಯಪಾಲರ ಪರವಾಗಿ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಾ ಪಾದಯಾತ್ರೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಎಲ್ಲಾ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿದರು.

ರಾಜ್ಯಪಾಲರು ಹಾಗೂ ರಾಜಭವನಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಪ್ರತಿಭಟನಾನಿರತ ನಾಯಕರು ಆರೋಪಿಸಿದರು.

ರಾಜ್ಯಪಾಲರ ಅಧಿಕಾರ ಹೈಕೋರ್ಟ್ ಎತ್ತಿಹಿಡಿದರೂ ಸಹಿಸದ ಕಾಂಗ್ರೆಸ್ಸಿಗೆ ಧಿಕ್ಕಾರವಿರಲಿ, ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ರಾಜ್ಯಪಾಲರ ಸಾಂವಿಧಾನಿಕ ಹುದ್ದೆಗೆ ಕಳಂಕ ತಂದ ಮುಖ್ಯಮಂತ್ರಿಗಳಿಗೆ ಧಿಕ್ಕಾರವಿರಲಿ, ರಾಷ್ಟ್ರಪತಿ ಮತ್ತು ರಾಜ್ಯಪಾಲರು, ನ್ಯಾಯಾಲಯ, ಇಡಿ, ಸಿಬಿಐ ವಿರೋಧಿ ಕಾಂಗ್ರೆಸ್ಸಿಗೆ ಧಿಕ್ಕಾರ, ರಾಜ್ಯಪಾಲರ ಹೆಸರಲ್ಲಿ ನೀಚ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.. ಹೀಗೆ ಮೊದಲಾದ ಭಿತ್ತಿಪತ್ರಗಳೊಂದಿಗೆ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಪ್ರತಿಭಟನೆ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments