Homeಕರ್ನಾಟಕಕಾರು ಅಪಘಾತವನ್ನೇ ಹಲ್ಲೆ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನ ಕಟ್ಟು ಕಥೆ ಬಯಲು

ಕಾರು ಅಪಘಾತವನ್ನೇ ಹಲ್ಲೆ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನ ಕಟ್ಟು ಕಥೆ ಬಯಲು

ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದನ್ನೇ ನೆಪವಾಗಿಟ್ಟುಕೊಂಡು ಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕಟ್ಟು ಕಥೆ ಕಟ್ಟಿರುವ ಸಂಗತಿ ತನಿಖೆಯಿಂದ ಬಯಲಾಗಿದೆ.

ಪೊಲೀಸ್‌ ತನಿಖೆಯಿಂದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿಯತ್ತು ಈಗ ಬಯಲಾಗಿದೆ.

ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಣಿಕಂಠನ ಆಟ ಬಯಲಾಗಿದೆ. ಈ ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಕಥೆ ಕಟ್ಟಿದ ಮಣಿಕಂಠ ರಾಠೋಡ್, ನವೆಂಬರ್ 18 ರಂದು ಮಧ್ಯರಾತ್ರಿ ಹಲ್ಲೆ ಮಾಡಿದ್ದಾರೆ ಎಂದು ಮಣಿಕಂಠ ಹೇಳಿದ್ದ. ಅದಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಮಣಿಕಂಠ ರಾಠೋಡ್ ಕಟ್ಟು ಕಥೆಯ ಇನ್ನೊಂದು ಮುಖ ಬಯಲಿಗೆ ಬಂದಿದೆ. ಇದರೊಂದಿಗೆ ಮಣಿಕಂಠ, ಪ್ರಿಯಾಂಕ್ ಖರ್ಗೆ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಕಲಬುರಗಿ ಎಸ್ಪಿ ಸ್ಪಷ್ಟನೆ

ಈ ಬಗ್ಗೆ ಸ್ಪಷ್ಟಪಡಿಸಿದ ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಸಲು, “ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಶಹಬಾದ್ ತಾಲೂಕಿನ ಶಂಕರವಾಡಿ ಕ್ರಾಸ್ ಬಳಿ ಮಾರಣಾಂತೀಕ ಹಲ್ಲೆ ಆಗಿತ್ತು ದೂರು ನೀಡಿದ್ದರು‌. ಅವರ ದೂರಿನ್ವಯ ಶಹಬಾದ್ ಠಾಣೆಯಲ್ಲಿ 307 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ ಸಾಕ್ಷಿಗಳ ವಿಚಾರಣೆ ಬಳಿಕ ಅದು ಕೊಲೆಯತ್ನ ಅಲ್ಲ. ಬದಲಾಗಿ ಅಪಘಾತ ಆಗಿದೆ ಎನ್ನುವುದು ಗೊತ್ತಾಗಿದೆ” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments