Homeಕರ್ನಾಟಕರಾಜಕೀಯಕ್ಕಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ: ಡಿ ಕೆ ಶಿವಕುಮಾರ್

ರಾಜಕೀಯಕ್ಕಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ: ಡಿ ಕೆ ಶಿವಕುಮಾರ್

ಬೆಳಗಾವಿ: ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುವರ್ಣಸೌಧದ ಬಳಿ ಶುಕ್ರವಾರ ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆ ವಿಚಾರವಾಗಿ ಗದ್ದಲ ಸೃಷ್ಟಿಸಿದ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

“ಅದೆಲ್ಲವೂ ಸುಳ್ಳು ಆರೋಪ. ಯಾವುದೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಕಥೆ. ರಾಜಕೀಯ ಉದ್ದೇಶಕ್ಕೆ ಈ ವಿಚಾರವನ್ನು ಎತ್ತುತ್ತಿದ್ದಾರೆ” ಎಂದರು.

ತೆಲಂಗಾಣ ಚುನಾವಣೆಯ ಜವಾಬ್ದಾರಿಯ ನಿರ್ವಹಣೆ ಬಗ್ಗೆ ಕೇಳಿದಾಗ, “ತೆಲಂಗಾಣದ ಜವಾಬ್ದಾರಿಯನ್ನು ನಿಭಾಯಿಸಿದ್ದು ನಾನಲ್ಲ. ನನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ನಿಭಾಯಿಸಿದರು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments